ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿಎಂಎಸ್ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್, ಅಂಬೇಡ್ಕರ್ ಜಯಂತಿ ಸಮಿತಿ ಅಧ್ಯಕ್ಷ ಪ್ರಕಾಶ್ ಔರಾದಕರ್, ಸುರೇಶ್ ಹಾದಿಮನಿ, ಶಿವಕುಮಾರ್, ಭವಾನಿ ವಳಕೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.