ಕಲಬುರಗಿ: ಅಲ್ಪಸಂಖ್ಯಾತರ ವಿಷಯಗಳ ಬಗ್ಗೆ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್. ಮಾದರಿಯಲ್ಲಿ 2 ವರ್ಷಗಳ ಅವಧಿಗೆ ಫೆಲೋಶಿಫ್ ನೀಡಲು ಸರ್ಕಾರದ ತಿದ್ದುಪಡಿ ಮಾಡಿ ಮಂಜೂರಾತಿ ನೀಡಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮಹಿಮೂದ್ ತಿಳಿಸಿದ್ದಾರೆ.
ಸಂಶೋಧನೆ ಕೈಗೊಳ್ಳಲು ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ ಇನ್ನುಳಿದ ವಿಷಯಗಳಲ್ಲಿ ಅಧ್ಯಯನ ನಡೆಸುತ್ತಿರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನು ಸಹ ಪರಿಗಣಿಸಿ, ಮುಂದುವರೆದು ಈ ಸ೦ಶೋದನೆಗಳಿಗಾಗಿ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಯಾವುದೇ ಸಂಘ ಸ೦ಸ್ಥೆಗಳು/ಸರ್ಕಾರದ ವತಿಯಿಂದ ನೀಡಲಾಗುವ ವಿದ್ಯಾರ್ಥಿವೇತನದ ಸೌಲಭ್ಯಗಳನ್ನು ಪಡೆದಿದ್ದಲ್ಲಿ ಈ ಸೌಲಭ್ಯಕ್ಕೆ ಅನರ್ಹ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ನಿವೇಶನ ಹಂಚಿಕೆ ಅರ್ಜಿ ವಿತರಣೆಗೆ ಚಾಲನೆ
ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 3 ವರ್ಷ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಎದ್ಯಾರ್ಥಿಗಳಿಗೆ ಹಿ೦ದಿನ ಆದೇಶವನ್ನು ತಿದ್ದುಪಡಿ ಮಾಡಿ, ಪ್ರತಿ ತಿ೦ಗಳು ರೂ.25,000/-ಗಳನ್ನು ಮತ್ತು ಪ್ರತಿ ವರ್ಷಕ್ಕೆ ಒಂದು ಬಾರಿಗೆ ರೂ.10,000/-(ನಿರ್ವಹಣಾ ವೆಚ್ಚ) ಹೀಗೆ ಒಟ್ಟು ವಾರ್ಷಿಕ ರೂ.3.10ಲಕ್ಷಗಳನ್ನು 2021-22ನೇ ಸಾಲಿನಿಂದ ಜಾರಿಗೆ ಬರುವಂತೆ ನೀಡಲು ಸರ್ಕಾರದ ಆದೇಶ ಹೊರಡಿಸಲು ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಪ್ರಸ್ತಾವನೆ ಪರಿಶೀಲಿಸಿ ಈ ಆದೇಶ ಸರ್ಕಾರದ ಉಪ ಕಾರ್ಯದರ್ಶಿ ಎಂ.ಎನ್ ಬಾನೊಳ್ಳಿ ಆದೇಶ ನೀಡಿದ್ದಾರೆ.