ಬೆಂಗಳೂರು: ಕೋವಿಡ್-19 ರೋಗಿಗಳಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ.
• ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಸಿ.ಹೆಚ್.ಬಿ.ಎಂ.ಎಸ್ ಪೋರ್ಟಲ್ ಮೂಲಕ ಹಾಗೂ ಇತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ.
• ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.
• ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಸರ್ಕಾರವು ನಿಗಧಿಪಡಿಸಿರುವ ಈ ಕೆಳಕಂಡ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.
ಜನರಲ್ ವಾರ್ಡ್, ರೂ. 10000/- ಹೆಚ್‍ಡಿಯು, ರೂ. 12000/-, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ, ರೂ. 15000/- ಐಸೊಲೇಷನ್ ಐಸಿಯು ವೆಂಟಿಲೇಟರ್ ಸಹಿತ, ರೂ. 25000/-
• ಒಂದೊಮ್ಮೆ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗಧಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ 1800 425 8330 ಗೆ ಹಾಗೂ 1912 ಗೆ ಕರೆ ಮಾಡಿ ದೂರು ನೀಡಬಹುದು
• sastgrievance@gmail.com ಗೆ ಇಮೇಲ್ ಮೂಲಕ ದೂರು ಸಲ್ಲಿಸಬಹುದು ಹಾಗೂ 08022536200 ಗೆ ಕರೆ ಮಾಡಬಹುದು.