ಕಲಬುರಗಿ: ಇಂದು ನಗರಕ್ಕೆ ಆಗಮಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವೇಳೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್, ಕೆಕೆಆರ್ಡಿಬಿ ಅಧ್ಯಕ್ಷ ಶಾಸಕರಾದ ದತಾತ್ರೇಯ ಸಿ ಪಾಟೀಲ್ ರೇವೂರ್, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಜಿಲ್ಲಾಧಿಕಾರಿ ವಿ.ವಿ ಜೋತ್ಸ್ನಾ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.