ಕಲಬುರಗಿ: ಕರೋನಾ ಸೋಂಕಿತ ರೋಗಿಗಳ ಬಳಿ ಇಎಸ್ಐಸಿ ಆಸ್ಪತ್ರೆಯಲ್ಲಿ ವೈದ್ಯರರು ಹಣ ಕೇಳುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದ ಆರೋಗ್ಯ ಖಾತೆ ಸಚಿವ ಡಾ. ಕೆ. ಸುಧಾಕರ ಅವರಿಗೆ ಕಲ್ಯಾಣ ಕರ್ನಾಟಕ ಕನ್ನಡಪರ ಒಕ್ಕೂಟ ಸಲ್ಲಿಸಿದ ಮನವಿಯಲ್ಲಿನ ಆರೋಪ ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಮಂಜುನಾಥ ನಾಲವಾರಕರ್ ಹಾಗೂ ಜಿಲ್ಲಾಧ್ಯಕ್ಷ ಸಚಿನ್ ಫರತಾಬಾದ್ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಕಲ್ಯಾಣ ಕರ್ನಾಟಕ ಕನ್ನಡಪರ ಒಕ್ಕೂಟದ ಮುಖಂಡರು ಇಂತಹ ಗಂಭೀರ ಆರೋಪ ಮಾಡುವ ಮೂಲಕ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್ ಗಳಿಗೆ ಮಾಡಿದ ನೇರ ಅವಮಾನ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು
ಅಲ್ಲದೇ, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹತ್ತಕ್ಕೂ ಹೆಚ್ಚು ಜನ ಸೇರಿ ಮನವಿ ಪತ್ರ ಸಲ್ಲಿಸುವ ಮೂಲಕ ಕರೋನಾ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳ ಎದುರಲ್ಲೇ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮನವಿ ಸಲ್ಲಿಸಿದ ಮುಖಂಡರ ಮೇಲೆ ಜಾಮೀನು ರಹಿತವಾಗಿರುವ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಳ್ಳ ಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ಕೋವಿಡ್ ಸೋಂಕು ನಿಯಂತ್ರಿಸಲು ನಿಯೋಜನೆಗೊಂಡ ಎಲ್ಲಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು, ಪೋಲಿ ಅಧಿಕಾರಿಗಳು, ವೈದ್ಯರ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.