ಕಲಬುರಗಿ: ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಬಳಕೆಯಲ್ಲಿ ನೀಡಲಾಗಿರುವ ಕೋವಿಡ್-೧೯ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಜವಾಬ್ದಾರಿಯಿಚಿದ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಜಿಮ್ಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶನಿವಾರ ಇಲ್ಲಿನ ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಕುರಿತು ಸಿ.ಟಿ.ಟಿ.ವಿ. ಮೂಲಕ ವೀಕ್ಷಿಸಿದಲ್ಲದೆ ಆಸ್ಪತ್ರೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಆಸ್ಪತ್ರೆಯ ವಿವಿಧ ವಿಭಾಗದ ಮುಖ್ಯಸ್ಥರಿಗೆ ವಹಿಸಿದ ಜವಾಬ್ದಾರಿ ಚಾಚು ತಪ್ಪದೆ ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದ ಸಚಿವರು ಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಹಾಸಿಗೆ ಹಂಚಿಕೆ, ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆ, ರೊಟೇಷನ್ ಅಧಾರಿತ ವೈದ್ಯ ಮತ್ತು ನರ್ಸಿಂಗ್ ಸಿಬ್ಬಂದಿ ಕಾರ್ಯನಿರ್ವಹಣೆಯ ಉಸ್ತುವಾರಿಗಾಗಿ ಹಿರಿಯ ಕೆ.ಎ.ಎಸ್. ಶ್ರೇಣಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸುವಂತೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ನಿರ್ದೇಶನ ನೀಡಿದರು.
ಚಿತ್ತಾಪುರ ಬಾರಿ ಮಳೆಗೆ ವಿದ್ಯುತ್ ಕಂಬಗಳು ನಾಶ.
ಕೋವಿಡ್ ರೋಗಿಗೆ ನೀಡಬೇಕಾದ ರೆಮಿಡಿಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ. ಆಕ್ಸಿಜನ್ ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಮತ್ತು ರೆಮೆಡ್ವಿಜರ್ ಇಂಜೆಕ್ಷನ್ ನಿರ್ವಹಣೆಗೆ ತಜ್ಙರ ತಂಡ ರಚನೆ ಮಾಡಬೇಕು. ಈ ತಂಡ ಪ್ರತಿದಿನ ಅವುಗಳ ಬಳಕೆಯ ಮೇಲುಸ್ತುವಾರಿ ಮೇಲೆ ನಿಗಾ ಇಡಬೇಕು. ಆಕ್ಸಿಜನ್ ಮತ್ತು ರೆಮೆಡ್ವಿಜರ್ ಬಳಕೆ ಕುರಿತು ಆಯಾ ದಿನದ ವರದಿಯನ್ನು ಸರ್ಕಾರಕ್ಕೆ ತಪ್ಪದೇ ನೀಡಬೇಕು ಎಂದು ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ್ ಅವರಿಗೆ ಸಚಿವ ಡಾ.ಕೆ.ಸುಧಾಕರ ಅವರು ಸೂಚಿಸಿದರು.
ಕೋವಿಡ್ ಮರಣ ಪ್ರಕರಣಗಳಲ್ಲಿ ಆಯಾ ದಿನದ ಡೆತ್ ಆಡಿಟ್ ವರದಿಯನ್ನು ಅಂದೇ ಕೈಗೊಂಡು ಸರ್ಕಾರಕ್ಕೆ ವರದಿ ನೀಡಬೇಕು. ಸಾವಿನ ಪ್ರಮಾಣ ತಗ್ಗಿಸಲು ಎಲ್ಲಾ ವೈದ್ಯರು ಶಕ್ತಿ ಮೀರಿ ಪ್ರಯತ್ನಿಸಬೇಕು. ಸಂಸ್ಥೆಯ ಎಲ್ಲಾ ವಿಭಾಗದ ವೈದ್ಯರು ಮತ್ತು ಸಿಬ್ಬಂದಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಸಂಸ್ಥೆಯ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಪೂರೈಸಲಿದ್ದು, ಅದಕ್ಕೆ ತಕ್ಕಂತೆ ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದೆ ರೋಗಿಗಳ ಆರೈಕೆ ಮಾಡಬೇಕು ಎಂದು ಸಂಸ್ಥೆಯ ಅಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ತಿಳಿಸಿದರು.
೨೪ ಗಂಟೆಗಳ ಕಾಲ ಜಿಮ್ಸ್ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸುವುದರಿಂದ ಇವರಿಗೆ ಸೂಕ್ತ ರಕ್ಷಣೆ ನೀಡಬೇಕು. ಇದಕ್ಕಾಗಿ ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ಸಚಿವ ಡಾ.ಕೆ.ಸುಧಾಕರ ಅವರು ನಿರ್ದೇಶನ ನೀಡಿದರು.
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 2 ಕೋಟಿ ಡೋಸ್ ಪೂರೈಕೆಗೆ ಆದೇಶ
ವ್ಯಾಕ್ಸಿನೇ?ನ್ ಪ್ರಕ್ರಿಯೆ ಚುರುಕುಗೊಳಿಸಿ: ಕೋವಿಡ್ ನಿಯಂತ್ರಣದಲ್ಲಿ ಲಸಿಕೆಯನ್ನು ಆಯುಧವನ್ನಾಗಿ ಬಳಸಬೇಕಿದ್ದು, ವ್ಯಾಕ್ಷಿನೇಷನ್ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ತೇಲ್ಕೂರ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ, ವಿಧಾನ ಪರಿ?ತ್ ಶಾಸಕರುಗಳಾದ ಬಿ.ಜಿ.ಪಾಟೀಲ್, ಶಶೀಲ್ ಜಿ. ನಮೋಶಿ, ಜಿಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀ? ಶಶಿ, ಡಿ.ಹೆಚ್.ಓ ಡಾ. ಶರಣಬಸಪ್ಪ ಗಣಜಖೇಡ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ ಸೇರಿದಂತೆ ಜಿಮ್ಸ್ ಆಸ್ಪತ್ರೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಇದ್ದರು.