ಕಲಬುರಗಿ: ಜಿ.ಪಂ.ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಗುರುಶಾಂತ ಪಟ್ಟೇದಾರ (65) ಇಂದು ನಿಧನವಾಗಿದ್ದಾರೆ.
ನಿನ್ನೆಯಷ್ಟೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸದ್ಯ ಎಐಎಮ್ಐಎಂ ಪಕ್ಷದ ಮುಖಂಡರೊಂದಿಗೆ ಗುರುತಿಸಿಕೊಂಡಿದ್ದರು. ಪಟ್ಟೇದಾರ ಸಂಸದ ಅಸಾದೊದ್ದೀನ್ ಅವರ ಜೊತೆ ಜಿಲ್ಲೆಯಲ್ಲಿ ವೇದಿಕೆ ಹಂಚಿಕೊಂಡಿದರು.