ವಿಶ್ವನಾಥ್ ಸಕಾಲಿಕ ಕ್ರಮದಿಂದ ತಪ್ಪಿದ ಗಂಡಾಂತರ

0
36

ಬೆಂಗಳೂರು: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಮಧ್ಯ ಪ್ರವೇಶದಿಂದ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಬಹುದಾಗಿದ್ದ ರೋಗಿಗಳ ಪರದಾಟ ತಪ್ಪಿದೆ.

ಯಲಹಂಕದ ಅಪೂರ್ವ ಆಸ್ಪತ್ರೆಯಲ್ಲಿ ಒಟ್ಟು 28 ಕೋವಿಡ್ ರೋಗಿಗಳು ದಾಖಲಾಗಿದ್ದಾರೆ. ಗುರುವಾರ ಬೆಳಗ್ಗೆ ಅಲ್ಲಿ ಆಮ್ಲಜನಕದ ಕೊರತೆ ಎದುರಾಗಿತ್ತು. ವಿಷಯ ತಿಳಿದ ವಿಶ್ವನಾಥ್ ಅವರು ತಕ್ಷಣವೇ ಆಮ್ಲಜನಕದ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು. ಆದರೆ, ಸಂಜೆಯ ವೇಳೆಗೆ ಮತ್ತೆ ಆಮ್ಲಜನಕದ ಕೊರತೆ ಉಂಟಾಗಿ ರೋಗಿಗಳು ಸಂಕಷ್ಟಕ್ಕೆ ಈಡಾಗುವುದರಲ್ಲಿದ್ದರು.

Contact Your\'s Advertisement; 9902492681

ಇದರ ಬಗ್ಗೆ ಮಾಹಿತಿ ಪಡೆದ ವಿಶ್ವನಾಥ್ ಅವರು ನೇರವಾಗಿ ಆಸ್ಪತ್ರೆಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ ಕೂಡಲೇ ಅಗತ್ಯವಿರುವಷ್ಟು ಆಮ್ಲಜನಕದ ಸಿಲಿಂಡರ್ ವ್ಯವಸ್ಥೆ ಮಾಡಿ ಎದುರಾಗಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್ ಅವರು, ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಬಗ್ಗೆ ವೈದ್ಯರು ನನ್ನ ಗಮನಕ್ಕೆ ತಂದ ತಕ್ಷಣ ನಾನು ಮತ್ತು ಪೊಲೀಸ್ ಅಧಿಕಾರಿಗಳು ದೊಡ್ಡಬಳ್ಳಾಪುರ ಮತ್ತು ಜಾಲದಲ್ಲಿರುವ ಘಟಕಗಳಿಂದ ಸಿಲಿಂಡರ್ ತರಿಸಿ ರೋಗಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸಿದ್ದೇನೆ ಎಂದು ತಿಳಿಸಿದರು.

ಯಲಹಂಕದ ವಿವಿಧ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಮನವೊಲಿಸಿ ಅಪೂರ್ವ ಆಸ್ಪತ್ರೆಯಲ್ಲಿ ದಾಖಲಾಗಿದ್ದ 28 ಸೋಂಕಿತರ ಪೈಕಿ 12 ಸೋಂಕಿತರನ್ನು ಸ್ಥಳಾಂತರ ಮಾಡಿ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ತಮ್ಮ ಸಾಮರ್ಥ್ಯ ಇರುವಷ್ಟು ರೋಗಿಗಳಿಗಿಂತ ಹೆಚ್ಚು ದಾಖಲಿಸಿಕೊಳ್ಳಬಾರದು. ಸಾಮರ್ಥ್ಯಕ್ಕಿಂತ ಹೆಚ್ಚು ರೋಗಿಗಳನ್ನು ದಾಖಲಿಸಿಕೊಂಡು ಅವರ ಜೀವದ ಜತೆ ಚೆಲ್ಲಾಟವಾಡಬಾರದು ಎಂದು ವಿಶ್ವನಾಥ್ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದರು.

ಎಲ್ಲೆಡೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ತಮಗೆ ಅಗತ್ಯವಿರುವಷ್ಟು ಆಮ್ಲಜನಕವನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಆಮ್ಲಜನಕ ಉತ್ಪಾದನಾ ಘಟಕಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಆಮ್ಲಜನಕದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದೂ ಅವರು ಸೂಚಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here