ಕಲಬುರಗಿ: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಕಲಬುರಗಿ ಜಿಲ್ಲಾ ಪಂಚಾಯಿತ್ ಹಾಗೂ ಜೆಮ್ಸ್ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶರಣಗೌಡ ದೌಲತರಾವ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿ ಜಾಥಾಕ್ಕೆ ಜಾಲನೆ ನೀಡಿ ಮಾತನಾಡಿದ ಅವರು ಮಾದಕ ವಸ್ತುಗಳಿಂದ ಸಮಾಜ ಹಾಗೂ ಆರೋಗ್ಯದ ಮೇಲೆ ದುಷ್ಟ ಪರಿಣಾಮ ಬಿರುತದೆ ಆದರಿಂದ ನಾಗರಿಕರು ಮಾದಕ ದ್ರವ್ಯ ಹಾಗೂ ವ್ಯಸನಗಳಿಂದ ದೂರ ಇರಬೇಕು ಎಂದು ಕರೆ ನೀಡಿದರು.
ಜಾಗೃತಿ ಜಾಥಾವನ್ನು ಆರೋಗ್ಯಕ್ಕಾಗಿ ನ್ಯಾಯ ನ್ಯಾಯಕ್ಕಾಗಿ ಆರೋಗ್ಯ ಎಂಬ ಘೋಷವಾಕ್ಯದ ಮೂಲಕ ಜಾಥಾ ಆರಂಭವಾಯಿತು, ಜಾಥಾದಲ್ಲಿ ಹಾನಿ ಕುರಿತು ಕರಪತ್ರ ಹಂಚುವುದರ ಜೊತೆಗೆ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿ ಹೇಳಲಾಯಿತು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಅಧಿಕಾರಿ ಡಾ. ರಾಜಕುಮಾರ ಕುಲಕರ್ಣಿ ಅವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದು, ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಉಮೇಶ್ ಎಸ್, ಮುಖ್ಯ ಅತಿಥಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಮ್.ಕೆ ಪಾಟೀಲ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಧಿಕಾರಿ ಡಾ. ಶಿವಕುಮಾರ ಸಿ.ಆರ್, ಡಾ.ಶಿವಾನಂದ ಸುರಗಾಳಿ, ಡಾ. ಪ್ರಭುಕಿರಣ ವ್ಹಿ ಗೋಗಿ, ಡಾ. ರಾಜಕುಮಾರ ಕುಲಕರ್ಣಿ ಸೇರಿದಂತೆ ಜೆಮ್ಸ್ ಆಸ್ಪತ್ರೆ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮ ಹಾಗೂ ಜಾಥಾದಲ್ಲಿ ಭಾಗವಹಿಸಿದರು.