ಶಾಲೆಗಳಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ

0
99

ಸುರಪುರ: 1995ರ ನಂತರ ಪ್ರಾರಂಭಗೊಂಡ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ವತಿಯಿಂದ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತಾ ಬಂದಿದ್ದು ಸ್ವಾತಂತ್ರ್ಯ ನಂತರ ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಾ ಬಂದಿದ್ದು ಅದು ೧೯೮೬ಕ್ಕೆ ನಿಂತು ಹೋಗಿದೆ, ನಂತರ ೨೦೦೬ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಅವರು ೧೯೮೬ ರಿಂದ ೧೯೯೩ ವರೆಗೆ ಅನುದಾನ ವಿಸ್ತರಿಸಿದರು ಇದಾದ ನಂತರ ೨೦೦೮ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ೧೯೯೩ ರಿಂದ ೧೯೯೫ ವರೆಗೆ ಅನುದಾನ ನೀಡುವದನ್ನು ವಿಸ್ತರಿಸಿತು ಆದರೆ ೨೦೦೮ ರ ನಂತರ ಅಧಿಕಾರಕ್ಕೆ ಬಂದ ನಂತರ ಬಂದ ಯಾವುದೇ ಸರಕಾರಗಳು ೧೧ ವರ್ಷಗಳಾದರೂ ೧೯೯೫ರ ನಂತರ ಪ್ರಾರಂಭಗೊಂಡ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೊಳಪಡಿಸದೇ ಇರುವುದು ವಿಷಾದನೀಯ ಹಾಗೂ ಕನ್ನಡ ಭಾಷೆಗೆ ಮಾಡಿದ ಅವಮಾನವಾಗಿದ್ದು ೧೯೯೫ರ ನಂತರ ಪ್ರಾರಂಭಗೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳು ಸರಕಾರದ ಸೌಲಭ್ಯಗಳಿಂದ ವಂಚಿತಗೊಂಡಿದ್ದು ಮತ್ತೊಂದು ಕಡೆ ಕಳೆದ ೨೩ ವರ್ಷಗಳಿಂದ ಈ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಶಿಕ್ಷಕರು ಕನಿಷ್ಠ ವೇತನದಲ್ಲಿ ದುಡಿಯುತ್ತಿದ್ದು ಸಂಕಷ್ಟದಲ್ಲಿದ್ದಾರೆ.

Contact Your\'s Advertisement; 9902492681

ಕೂಡಲೇ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ೧೯೯೫ರ ನಂತರ ಪ್ರಾರಂಭಗೊಂಡ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ ಶಾಲೆ ಹಾಗೂ ಭಾಷೆ ಉಳಿಸುವ ಹಾಗೂ ಶಿಕ್ಷಕರ ಜೀವನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ, ಸಂಘದ ಜಿಲ್ಲಾ ಉಪಾಧ್ಯಕ್ಷ ಅಪ್ಪಣ್ಣ ಕುಲಕರ್ಣಿ, ಸದಸ್ಯರಾದ ಲಂಕೆಪ್ಪ ಕವಲಿ, ಶಿವಕುಮಾರ ಮೇಟಿ ರುಕ್ಮಾಪುರ ಹಾಗೂ ಇತರರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here