ಸುರಪುರ: ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಮುಖಂಡರು ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೇರೆ ತಾಲೂಕಿನ ಕಿರುಗುಂದ ಗ್ರಾಮದಲ್ಲಿ ದಲಿತ ಸಮುದಾಯ ಕೆ.ಎಲ್.ಪುನೀತ್ ಎಂಬ ಯುವಕನ ಮೇಲೆ ಸುಳ್ಳು ಆರೋಪ ಹೊರಿಸಿ ಕ್ರೂರವಾಗಿ ಹಲ್ಲೆ ನಡೆಸಿದ್ದಲ್ಲದೆ,ಆ ಯುವಕನಿಗೆ ಮೂತ್ರ ಕುಡಿಸುವ ಮೂಲಕ ಅಮಾನವೀಯತೆ ಮೆರೆದಿದ್ದು ಕೂಡಲೇ ಈ ಘಟನೆಗೆ ಕಾರಣನಾದ ಪಿಎಸ್‍ಐ ಅವರನ್ನು ಸೇವೆಯಿಂದ ವಜಾಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು.
ಅದೇರೀತಿಯಾಗಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಕಾಮುಕರಿಗೆ ಗಡಿಪಾರು ಮಾಡುವ ಜೊತೆಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ನೀಡಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಲಾಕ್‍ಡೌನ್ ಮುಗಿದ ನಂತರ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ನಂತರ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ವೆಂಕೋಬ ದೊರೆ ಬೊಮ್ಮನಹಳ್ಳಿ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ ರಮೇಶ ಬಾಚಿಮಟ್ಟಿ ಶೇಖರ ಮಂಗಳೂರು ಮರಲಿಂಗ ಹುಣಸಿಹೊಳೆ ತಿಪ್ಪಣ್ಣ ಶೆಳ್ಳಗಿ ಎಂ.ಪಟೇಲ್ ಬಸವರಾಜ ಶೆಳ್ಳಗಿ ಮಾನಪ್ಪ ಶೆಳ್ಳಗಿ ಮಲ್ಲೇಶ ಶೆಳ್ಳಗಿ ಪರಮೇಶ ಬಾಚಿಮಟ್ಟಿ ಭೀಮರಾಯ ಮಂಗಳೂರು ಸೇರಿದಂತೆ ಅನೇಕರಿದ್ದರು.