ಕಲಬುರಗಿ : ಭಾಷಾ ವಿದ್ವಾಂಸರು, ಸಾಹಿತ್ಯ ಲೋಕದ ಮೇರು ಕಳಸ, ಕಲ್ಯಾಣ ಕರ್ನಾಟಕ ಭಾಗದ ಸಾಹಿತ್ಯ ಕ್ಷೇತ್ರದ ಆಲದ ಮರದಂತಿದ್ದ ಪ್ರೊ.ವಸಂತ ಕುಷ್ಟಗಿ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಶೋಕ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ಬರೆದು ಕನ್ನಡವನ್ನು ಶ್ರೀಮಂತಗೊಳಿಸಿದ ಪ್ರೊ.ಕುಷ್ಟಗಿ ಅವರ ನಿಧನದಿಂದಾಗಿ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ನೀಡುವಂತೆ ಭಗವಂತನದಲ್ಲಿ ಅವರು ಕೋರಿದ್ದಾರೆ.