ಕಲಬುರಗಿ: ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಸೋಮವಾರದವರೆಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಕೆಟಗರಿಯಲ್ಲಿ ಬರುವ ಕಪಲ್ ಪ್ರಕರಣಗಳ ವರ್ಗಾವಣೆ ವಿರೋಧಿಸಿ ಇಂದು ಶಿಕ್ಷಣ ಆಯುಕ್ತಾಲಯದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿರಲಿಲ್ಲ, ಈ ಹಿನ್ನೆಲೆಯಲ್ಲಿ ತಮಗೆ ಆಗುತ್ತಿರುವ ಅನ್ಯಾಯ ಕುರಿತು ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ, ಮಾಜಿ ಸದಸ್ಯ ಶಶೀಲ್ ನಮೋಶಿ ಗಮನಕ್ಕೆ ತಂದಿದ್ದರು. ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದಕ್ಕೆ ಕೈ ಜೋಡಿಸಿದ್ದರು.
ಸ್ಥಳಕ್ಕೆ ಆಗಮಿಸಿದ ಮಟ್ಟೂರ್ ಕಮಿಷನರ್ ಅವರೊಂದಿಗೆ ಚರ್ಚಿಸಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಸೋಮವಾರದವರೆಗೆ ಮುಂದೂಡುವಂತೆ ಮಾಡಿದರು.