ದಲಿತರಿಗೆ ಉಚಿತ ದವಸ- ಧಾನ್ಯ ನೀಡಲು ಛಲವಾದಿ ನಾರಾಯಣ ಸ್ವಾಮಿ ಮನವಿ

0
41

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ವಕ್ತಾರ ಹಾಗೂ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಭೇಟಿ ನೀಡಿ ದಲಿತ ವರ್ಗದವರಿಗೆ ನವೆಂಬರ ವರೆಗೆ ರಾಜ್ಯ ಸರ್ಕಾರದಿಂದ ಉಚಿತ ದವಸ ಧಾನ್ಯ ನೀಡುವಂತೆ ಮನವಿ ಮಾಡಿದ್ದಾರೆ.

ಕೊರೋನಾ ಸಂಕಷ್ಟಕ್ಕೆ ಅನೇಕ ರೀತಿಯ ಪ್ಯಾಕೇಜಗಳು ನೀಡಿದ್ದರೂ ಸಹ ತಳಸಮುದಾಯಗಳು ಅದರಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ : ಈ ಪ್ಯಾಕೇಜ್ಗಳಲ್ಲಿ ಅವಕಾಶವೇ ಸಿಗಲಾರದ ಕಾರಣ ಸಮಾಜಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ-ವರ್ಗಗಳಿಗೆ ವಿಶೇಷವಾಗಿ ಸುಮಾರು 6 ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ಉಚಿತವಾಗಿ ನೀಡಬೇಕೆಂದು ಛಲವಾದಿ ನಾರಾಯಣ ಸ್ವಾಮಿಯವರು ಹಾಗೂ ಮೋರ್ಚಾದ ರಾಜ್ಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here