ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ೨೦೧೮ನೇ ವರ್ಷದಲ್ಲಿ ಪ್ರಥಮ ಆವೃತ್ತಿಯಾಗಿ ಮುದ್ರಣಗೊಂಡಿರುವ ವಿವಿಧ ಪ್ರಕಾರಗಳ ಕನ್ನಡದ ಅತ್ಯುತ್ತಮ ಕೃತಿಗಳಿಗೆ ಬಹುಮಾನ ನೀಡಲಾಗುತ್ತಿದೆ. ಇದಕ್ಕಾಗಿ ವಿವಿಧ ಪ್ರಕಾರಗಳ ಕನ್ನಡದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.
ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ೨೦೧೮ರ ಜನವರಿ ೧ ರಿಂದ ಡಿಸೆಂಬರ್ ೩೧ ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ ೨೦೧೮ ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುತ್ತದೆ.
ಪುಸ್ತಕ ಬಹುಮಾನಕ್ಕಾಗಿ ಪ್ರಕಟವಾದ ಪುಸ್ತಕಗಳ ತಲಾ ೪ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ವಿಳಾಸಕ್ಕೆ ರಿಜಿಸ್ಟರ‍್ಡ್ ಅಂಚೆ/ಕೋರಿಯರ್ ಮೂಲಕ ಅಥವಾ ಖುದ್ದಾಗಿ 2019 ರ ಜುಲೈ 10 ರೊಳಗಾಗಿ ಸಲ್ಲಿಸಬೇಕು. ಕಳುಹಿಸಲ್ಪಡುವ ಕೃತಿಯ ಮೇಲೆ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎಂಬುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ 080-22211730, 22106460 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.