ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರದ ವತಿಯಿಂದ ೧ ಲಕ್ಷ. ರೂ ಪರಿಹಾರ ನೀಡುವ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿಗಳ ನಿರ್ಧಾರವನ್ನು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸ್ವಾಗತಿಸಿದ್ದಾರೆ.
ಇಂತಹ ಘೋ?ಣೆ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦ ರಿಂದ ೩೦ ಸಾವಿರ ಕುಟುಂಬಕ್ಕೆ ನೆರವು ಸಿಗಲಿದೆ. ಈ ಮಹತ್ತರ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುವದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.