ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್‍ಗಳ ನವೀಕರಣಕ್ಕಾಗಿ ಅರ್ಜಿ ಆಹ್ವಾನ

0
42

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಅನುದಾನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹೆಮೂದ್ ಎಸ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಚರ್ಚ್‍ಗಳ ನವೀಕರಣ/ಆವರಣ ಗೋಡೆ, ಸ್ಮಶಾನ ಆವರಣ ಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಮತ್ತು ಕ್ರಿಶ್ಚಿಯನ್ ಸಂಘ-ಸಂಸ್ಥೆಯಿಂದ ಕಾರ್ಯನಿರ್ವಹಿಸುತ್ತಿರುವ ಅನಾಥಾಲಯ, ವೃದ್ಧಾಶ್ರಮ, ಹೆಚ್.ಐ.ವಿ./ಏಡ್ಸ್ ಸೋಂಕಿತ ವ್ಯಕ್ತಿಗಳ ಆಶ್ರಯಧಾಮ ಮತ್ತು ಮಾನಸಿಕ ಹಾಗೂ ದೈಹಿಕ ವಿಕಲಚೇತನರ ಆಶ್ರಯಧಾಮಗಳಿಗೆ ಸರ್ಕಾರದಿಂದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಹಾಯ ಅನುದಾನ ನೀಡಲಾಗುತ್ತಿದ್ದು, ಈ ಯೋಜನೆ ಹಾಗೂ ಕಾರ್ಯಕ್ರಮದಡಿ ಸೌಲಭ್ಯ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಆಯಾ ತಾಲ್ಲೂಕಿನ ಮಾಹಿತಿ ಕೇಂದ್ರದಿಂದ ಪಡೆಯಬೇಕು. ಇಲಾಖೆಯ ವೆಬ್‍ಸೈಟ್http://www.gokdom.kar.nic.in ದಿಂದ ಪಡೆಯಬಹುದಾಗಿದೆ.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಪ್ರಸ್ತಾವನೆಯನ್ನು ಕಲಬುರಗಿ ನಗರಾಭಿವೃಧ್ಧಿ ಪ್ರಾಧಿಕಾರ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here