ಸೈನಿಕ ಕಲ್ಯಾಣ ಇಲಾಖೆ: ಗ್ರೂಪ್ ‘ಡಿ’ ದಲಾಯತ್ ಹುದ್ದೆಗೆ ಅರ್ಜಿ ಆಹ್ವಾನ

0
73

ಕಲಬುರಗಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿಯಿರುವ ಓರ್ವ ಗ್ರೂಪ್ ‘ಡಿ’ ದಲಾಯತ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುವರ್ನಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸೈನಿಕರಾಗಿರಬೇಕು. 10ನೇ ತರಗತಿ ಪಾಸಾಗಿರಬೇಕು. 2021ರ ಜೂನ್ 30ಕ್ಕೆ ವಯೋಮಿತಿ 18 ರಿಂದ 52 ವರ್ಷದೊಳಗಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಿನಿ ವಿದಾನಸೌಧ, ಕಲಬುರಗಿ 585102 ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2021ರ ಜುಲೈ 3 ರೊಳಗಾಗಿ ಕಚೇರಿಯಲ್ಲಿ ಸಲ್ಲಿಸಬೇಕು.

Contact Your\'s Advertisement; 9902492681

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472-225003ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here