ಕಲಬುರಗಿ: ಇಲ್ಲಿನ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಅವರನ್ನು ಸನ್ಮಾನಿಸಲಾಗುವುದು ಎಂದು ಮಹಾಸಭಾ ಜಿಲ್ಲಾ ಘಕಟದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ತಿಳಿಸಿದ್ದಾರೆ.
ನಗರದ ಟಿ.ಎ.ಪಾಟೀಲ ಆಸ್ಪತ್ರೆ ಸಮೀಪವಿರುವ ಮಹಾಂತ ನಗರದ ಬಸವ ಮಂಟಪದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮೂಡ, ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಆಗಮಿಸಲಿದ್ದಾರೆ.
ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಬಸವ ಕೇಂದ್ರದ ಖಜಾಂಚಿ ಸೋಮಣ್ಣ ನಡಕಟ್ಟಿ ಗೌರವ ಉಪಸ್ಥಿತಿ ಇರಲಿದ್ದು, ಪ್ರಭುಲಿಂಗ ಮಹಾಗಾಂವಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಕೋರಿದ್ದಾರೆ.