ಸಾರ್ವಜನಿಕರಿಗೆ ಉಚಿತ ಕೋವಿಡ್ ಲಸಿಕೆ

0
38

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಸಾರ್ವಜನಿಕರಿಗೆ ಉಚಿತ ಕೋವಿಡ್-19, ಲಸಿಕಾ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ “ಎ” ಮತ್ತು “ಬಿ” ವತಿಯಿಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸ್ವಯಂಸೇವಕಿಯರಿಗೂ ಮತ್ತು ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕೋವಿಡ್-19, ಲಸಿಕೆಯನ್ನು ನೀಡಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಘಟಕ – ‘ಅ’ ದ ಕಾರ್ಯಕ್ರಮಾಧಿಕಾರಿಗಳಾದ ಡಾ. ಪರವಿನ್ ರಾಜೆಸಾಬ್ ಮತ್ತು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಕೋವಿಡ್-19, ಲಸಿಕೆಯನ್ನು ಪಡೆದು ಕೊಂಡರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪದವಿ ಮಹಿಳಾ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ, ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ, ಡಾ. ಶಿವರಾಜ. ಗೌನಳ್ಳಿ, ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ್ ಪತ್ತಾರ ಮತ್ತು ಮಹಾವಿದ್ಯಾಲಯದ ಬೋಧಕ, ಬೋಧಕೇತರ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸ್ವಯಂ ಸೇವಕಿಯರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು ಎಂದು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕಿಯಾದ ಕುಮಾರಿ. ಪೂಜಾ ಮತ್ತು ಕುಮಾರಿ. ಸುಮಾ ಅವರು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here