ಕಲಬುರಗಿ: ಸಂಚಾರಿ ನಿಯಮ ಉಲ್ಲಂಘಿಸಿದ ಬೈಕ್ ಸವಾರರ ಬೈಕ್ ಗಳನ್ನು ತೆರವುಗೊಳಿಸಿದ ಪೊಲೀಸರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಎಚ್ಚರಿಕೆ ನೀಡಿದರು.
ಎಸ್ಪಿ ಯಡಾ ಮಾರ್ಟಿನ್ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆಯ ಪೊಲೀಸ್ ಅಧಿಕಾರಿ ವೀರೇಶ ಕರಡಿಗುಡ್ಡ ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಬಸ್ ನಿಲ್ದಾಣದ ಬಳಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ತೆಗೆದುಕೊಂಡು ಠಾಣೆಗೆ ಕರೆ ತಂದು ನೊಟೀಸ್ ನೀಡಿ ದಂಡ ಹಾಕಿ ಎಚ್ಚರಿಕೆ ನೀಡಿದರು.
ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.