ಸಮಗ್ರ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಿ: ದತ್ತಾತ್ರೇಯ ಪಾಟೀಲ

0
36

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಕೆ.ಕೆ.ಆರ್.ಡಿ.ಬಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗಳು ಮಂಡಳಿಯೊಂದಿಗೆ ಕೈಜೋಡಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ಅವರು ಪ್ರದೇಶದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಮಂಗಳವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಝುಮ್ ಮೀಟ್ ಮೂಲಕ ಪ್ರದೇಶದ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಸಲ್ಲಿಕೆ, ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದರು. ಕೋವಿಡ್ ಲಾಕ್ ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನು?ನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ಕೋವಿಡ್ ಮೂರನೇ ಅಲೇ ಹಿನ್ನೆಲೆಯಲ್ಲಿ ಮಕ್ಕಳಿಗೆ ನೀಡಲಾಗುವ ಚಿಕಿತ್ಸಾ ಸೌಕರ್ಯಗಳು ಹೆಚ್ಚಿಸಬೇಕು. ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಸೇರಿದಂತೆ ಪ್ರದೇಶದ ಜಿಲ್ಲಾಧಿಕಾರಿಗಳು ಮತ್ತು ಮಂಡಳಿಯ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here