ವಿದ್ಯಾರ್ಥಿಗಳು ಸರಕಾರದ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಶಾಸಕ ರಾಜುಗೌಡ

0
25

ಸುರಪುರ:ಕೋವಿಡ್ ಕಾರಣದಿಂದ ಈಗ ಆನ್ಲೈನ್ ಕ್ಲಾಸ್‌ಗಳೆ ವಿದ್ಯಾರ್ಥಿಗಳಿಗೆ ಪ್ರಮುಖವಾಗಿವೆ.ಇದನ್ನು ಮನಗಂಡು ಸರಕಾರ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ನೀಡುತ್ತಿದೆ.ಸರಕಾರದ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ರಾಜುಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಿಸಿ ಮಾತನಾಡಿ,ಟ್ಯಾಬ್ ಒಳ್ಳೆಯದಕ್ಕೆ ಬಳಕೆ ಮಾಡಿಕೊಳ್ಳಿ ಹಾಗು ಇಂಟರನೆಟ್ ಸದುಪಯೋಗವಾಗಬೇಕು ದುರ್ಬಳಕೆ ಬೇಡ ಎಂದರು.ಅಲ್ಲದೆ ಕೊರೊನಾ ಸಂದರ್ಭದಲ್ಲಿ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಲಸಿಕೆ ಪಡೆದುಕೊಳ್ಳಿ, ಲಸಿಕೆ ಪಡೆದವರಿಗೆ ಕೊರೊನಾ ಬಂದರು ಯಾವುದೇ ಹಾನಿ ಮಾಡುವುದಿಲ್ಲ.ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಲೇಜಿನಲ್ಲಿಯೆ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.ಅಲ್ಲದೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಷಯವಾರು ಪುಸ್ತಕಗಳು ಬರದಿರುವ ಬಗ್ಗೆ ಮಾಹಿತಿ ಬಂದಿದೆ.ಆದ್ದರಿಂದ ಈ ಕಾಲೇಜಿನಲ್ಲಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುಸ್ತಕಗಳನ್ನು ಕೊಡಿಸವುದಾಗಿ ಭರವಸೆ ನೀಡಿದರು.

Contact Your\'s Advertisement; 9902492681

ಕಾಲೇಜಿನ ಪ್ರಾಂಶುಪಾಲರಾದ ವೆಂಕೋಬ ಬಿರಾದಾರ್ ಅವರು ಮಾತನಾಡಿ,ನಮ್ಮ ಕಾಲೇಜಿನ ಯಾವುದೇ ಸಮಸ್ಯೆಗೆ ಶಾಸಕರು ಪರಿಹರಿಸುತ್ತಾರೆ.ಇಂದು ಕೂಡ ಕಾಲೇಜಿಗೆ ಬಂದು ಎಲ್ಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡುವುದಲ್ಲದೆ ವಿದ್ಯಾರ್ಥಿಗಳಿಗಾಗಿ ಲಸಿಕೆ ಹಾಕಿಸುವ ವ್ಯವಸ್ಥೆಯನ್ನು ಕಲ್ಪಿಸುತ್ತಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.

ನಂತರ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ವೇಣುಗೋಪಾಲ ಜೇವರ್ಗಿ ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್ ಪಿಐ ಎಸ್.ಎಮ್.ಪಾಟೀಲ್ ನರಸಿಂಹಕಾಂತ ಪಂಚಮಗಿರಿ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here