ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
165

ಕಲಬುರಗಿ: ಚಿತ್ತಾಪೂರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 03 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿತ್ತಾಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ಪೂರ್ಣಗೊಂಡಿರಬೇಕು.

Contact Your\'s Advertisement; 9902492681

ಅರ್ಜಿ ಸಲ್ಲಿಸಲು ಇದೇ ಜುಲೈ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ WWW.anganwadirecruit.kar.nic.in ಭೇಟಿ ನೀಡಬಹುದು ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಚಿತ್ತಾಪೂರ ದೂರವಾಣಿ ಸಂ:08474-236393 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here