ಶ್ರೀ ಜನನಿ ಮಹಿಳಾ ಮಹಾವಿದ್ಯಾಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ

1
20

ಸುರಪುರ: ಅಮರೇಶ್ವರ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಸತ್ಯಂಪೇಟ್ ಶ್ರೀ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವತಿಯಿಂದ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲರಾದ ಕು.ಬಸವರಾಜೇಶ್ವರಿ ಘಂಟಿ ಯವರು, ಈ ಶತಮಾನದ ಮಹಾ ಮಾರಿ ಕೊರೋನಾ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ, ಅದರ ವಿರುದ್ದ ಇಡೀ ವೈದ್ಯಕೀಯ ಲೋಕವೇ ಸಮರಕ್ಕೆ ಇಳಿದಿದೆ, ಅದರ ಜಿತೆಗೆ ಸಾರ್ವಜನಿಕರೂ ಕೂಡ ಅರಿವು ಮತ್ತು ತಿಳುವಳಿಕೆಯಿಂದ ಸಹಕರಿಸುವುದು ಪ್ರತಿಯೊಬ್ಬರ ಕರ್ತವ್ಯ, ಈಗಾಗಲೇ ಸರಕಾರ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆಯನ್ನು ನೀಡುವ ಅಭಿಯಾನವನ್ನು ಹಮ್ಮಿಕೊಂಡಿದೆ ಇದರ ಬಗ್ಗೆ ಹಲವರು ಅಪಪ್ರಚಾರ ಮಾಡುತ್ತಿದ್ದಾರೆ ಇದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳದೇ ಧೈರ್ಯವಾಗಿ ಲಸಿಕೆ ಹಾಕಿಸಿಕೊಳ್ಳಿ ಮತ್ತು ನಿಮ್ಮವರಿಗೂ ಲಸಿಕೆ ಹಾಕಿಸಿಕೊಳ್ಳಲು ತಿಳಿಸಿ ಇದರ ಬಗ್ಗೆ ಜಾಗೃತಿ ಮೂಡಿಸಿ ಒಗ್ಗಟ್ಟಿನಿಂದ ಪ್ರಯತ್ನಿಸಿದರೆ ಈ ಸೊಂಕನ್ನು ಸಂಪೂರ್ಣವಾಗಿ ತೊಲಗಿಸಬಹುದು ಎಂದು ಕರೆನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಲೇಜಿನ ಅನೇಕ ಜನ ಉಪನ್ಯಾಸಕರು ಹಾಗು ವಿದ್ಯಾರ್ಥಿನಿಯರು ಲಸಿಕೆ ಪಡೆದುಕೊಂಡರು. ಕಾಲೇಜಿನ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಲ್ಲಿಕಾರ್ಜುನ ಕಮತಗಿ, ಉಪನ್ಯಾಸಕರಾದ ಶ್ರೀಮತಿ ಸುವರ್ಣಾ ಅಂಟೋಳಿ, ವೆಂಕಟೇಶ ಜಾಲಗಾರ, ತಿರುಪತಿ ಕೆಂಭಾವಿ, ಬೀರೇಶ ದೇವತ್ಕಲ್, ಮರೆಮ್ಮ ಕಟ್ಟಿಮನೆ,ಶ್ರೀದೇವಿ ನಾಯಕ, ಅಂಬ್ರೇಶ ಚಿಲ್ಲಾಳ, ಮಹೇಶಕುಮಾರ ಗಂಜಿ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here