ಶಹಾಬಾದ: ನಗರದಲ್ಲಿ ಕೋವಿಡ್-೧೯ ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಸ್ಥಾಪನೆ ಮಾಡಲಾದ ಕೋವಿಡ್ ಮಾಹಿತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಶಿವಪುತ್ರ ಕರಣಿಕ್ ಹಾಗೂ ಬಡ್ತಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ಚೆನ್ನೂರ್ ಮಾತನಾಡಿ, ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವನವನ್ನು ಲೆಕ್ಕಿಸದೇ ಶಿಕ್ಷಕರು ಕೋವಿಡ್ ಮಾಹಿತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.ಅಲ್ಲದೇ ಭಯದ ವಾತಾವರಣದಲ್ಲಿ ಯಾವುದನ್ನೂ ಲೆಕ್ಕಿಸದೇ ಕರ್ತವ್ಯವನ್ನು ಪ್ರಾಮಾಣಿಕವಾಗಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕೆಲವರಿಗೆ ಕೊರೊನಾ ಬಂದಿದ್ದು, ಅವರು ಗುಣಮುಖರಾಗಿ ಬಂದಿದ್ದಾರೆ.ಸಾಂಕ್ರಾಮಿಕ ರೋಗ ಹರಡುವಂತ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬಂದು ಕೆಲಸ ಮಾಡಿದ ಶಿಕ್ಷಕರಿಗೆ ಗಳಿಕೆ ರಜೆ ನೀಡಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಪರಶುರಾಮ ಗುತ್ತಲ್,ನರಸಪ್ಪ, ಗೋಪಾಲ, ವರುಣಕುಮಾರ, ಪ್ರಮೋದ ಕಡಕೋಳ, ಭರಮಪ್ಪ ಸೇರಿದಂತೆ ಇತರರು ಇದ್ದರು.