ಮೈಸೂರು: ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ನವರಿಗೆ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಪ್ರೊ.ರಾಜಣ್ಣ ನವರು ಪ್ರತಿಷ್ಠಿತ ಏಷ್ಯದಲ್ಲೇ ಹೆಸರುವಾಸಿಯಾಗಿರುವ ಮೈಸೂರಿನ ವಿಶ್ವ ವಿದ್ಯಾಲಯದ ಕುಲಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಜೊತೆಗೆ ವಿಧ್ಯಾರ್ಥಿಗಳಿಗೆ ಯಾವುದೇ ರೀತಿಯ ಭೇದ ಬಾವಮಾಡದೆ ಅವರಿಗೆ ಮೂಲಭೂತ ಸೌಕರ್ಯ ಮತ್ತು ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹ ಮತ್ತು ಆತ್ಮವಿಶ್ವಾಸ ವೃದ್ಧಿ ಗೊಳಿಸುವಂತ ಕಾರ್ಯಾಗಾರಗಳನ್ನು ಅಯೋಜಿಸುವುದರ ಮೂಲಕ ಹಲವಾರು ವಿಧ್ಯಾರ್ಥಿಗಳ ಭವಿಷ್ಯ ರೂಪಿಸಿ ತಮ್ಮ ಪ್ರಾಮಾಣಿಕ ಸೇವೆಯಿಂದ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಉತ್ತಮ ಭಾಂಧವ್ಯ ಹೊಂದಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್ ತಿಳಿಸಿದರು.
ಎಲ್ಲರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ ,ಪ್ರಸ್ತುತ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ,ಇವರ ಅಧಿಕಾರಾವದಿಯಲ್ಲಿ ಇನ್ನಷ್ಟು ಉತ್ತಮ ಕೆಲಸಗಳನ್ನು ಮಾದುತ್ತಾರೆಂಬ ನಿರೀಕ್ಷೆಯೊಂದಿಗೆ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಎಂ.ಚಂದ್ರಶೇಖರ್, ಮಾಜಿ ಮಹಾಪೌರರಾದ ಪುರುಷೋತ್ತಮ ರವರು, ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಜಿಲ್ಲಾ ಸಂಚಾಲಕರಾದ ಕೃಷ್ಣೇಗೌಡ ಮತ್ತು ದ್ಯಾವಪ್ಪ ನಾಯಕ ಮುಂತಾದವರು ಉಪಸ್ಥಿತರಿದ್ದರು.