ಶಹಾಬಾದ: ಕೊರೋನಾ ಸೋಂಕು ಇನ್ನೂ ಕಡಿಮೆಯಾಗಿಲ್ಲ. ಹಾಗಾಗಿ ಸರಕಾರದ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದ ಕಾಪಾಡಬೇಕು ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ಶನಿವಾರ ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ನಗರ ಪೆÇಲೀಸ್ ಠಾಣೆಯಲ್ಲಿ ನಡೆದ ನಾಗರಿಕರ ಶಾಂತಿ ಸೌಹಾರ್ದ ಸಭೆಯಲ್ಲಿ ಮಾತನಾಡಿದರು.
ಈದ್ಗಾ ಮೈದಾನಗಳಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ. ತೆರೆದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಟ್ಟುಗೂಡುವುದನ್ನು ನಿμÉೀಧಿಸಲಾಗಿದೆ. ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆ ನಿರ್ವಹಿಸಲು ಅವಕಾಶವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕಾಗಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿವಾಯ್‍ಎಸ್‍ಪಿ ಉಮೇಶದ ಚಿಕ್ಕಮಠ ಮಾತನಾಡಿ, ಬಕ್ರೀದ್ ಹಬ್ಬವನ್ನು ಹಿಂದಿನ ವರ್ಷ ಶಾಂತಿಯುತವಾಗಿ ಆಚರಿಸಿದಂತೆ ಈ ಬಾರಿಯೂ ಶಾಂತಿಯುತವಾಗಿ ಆಚರಿಸಲು ಎಲ್ಲಾ ಸಮುದಾಯದವರು ಕೈ ಜೋಡಿಸಬೇಕು. ಹಬ್ಬದ ಸಂದರ್ಭದಲ್ಲಿ ಪ್ರಚೋದನಾಕಾರಿ ಚಟುವಟಿಕೆ ನಡೆಯಂತೆ ನೋಡಿಕೊಳ್ಳಿ. ನಾಗರಿಕರ ಹಿತ ಕಾಪಾಡುವುದು ಮತ್ತು ಶಾಂತಿ ಸುವ್ಯವಸ್ಥೆ ಪಾಲನೆಯು ಪ್ರತಿಯೊಬ್ಬರ ಜವಾಬ್ದಾರಿ. ಸಣ್ಣಪುಟ್ಟ ಅಹಿತಕರ ಘಟನೆ ನಡೆದರೂ ತಕ್ಷಣವೇ ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಪಿಐ ಸಂತೋಷ ಹಳ್ಳೂರ್ ಮಾತನಾಡಿ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ಯಾವ ಸಮುದಾಯದವರೇ ಆಗಿರಲಿ ಸೂಕ್ತ ದಾಖಲೆ ಮತ್ತು ಜಾನುವಾರು ಸಾಗಾಟದ ನಿಯಮ ಪಾಲನೆ ಮಾಡಿದರೆ ಯಾವ ಸಮಸ್ಯೆಯೂ ಇರುವುದಿಲ್ಲ. ಕೊರೊನಾ ಸಂದರ್ಭ ಇದಾಗಿದ್ದು, ಸರ್ಕಾರದ ಸೂಚನೆಯನ್ನು ಪಾಲನೆ ಮಾಡುವ ಮೂಲಕ ಬಕ್ರೀದ್ ಹಬ್ಬದ ಆಚರಣೆಯ ವೇಳೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ,ಕಸ ಹಾಗೂ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ನಗರಸಭೆಯಿಂದ ಬರುವ ವಾಹನಗಳಲ್ಲಿ ಹಾಕಿದರೇ ವಿಲೇವಾರಿ ಮಾಡಲಾಗುವುದು. ಮಸೀದಿಗಳಲ್ಲಿ 50 ಜನ ಮೀರದಂತೆ ಪ್ರಾರ್ಥನೆ ಮಾಡಬೇಕು. ಮಸೀದಿ ಸಣ್ಣದಿದ್ದರೆ 20 ಜನ ಸಾಕು. ಒಂದೊಮ್ಮೆ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರೆ ಸರದಿಯಂತೆ ಪ್ರಾರ್ಥನೆ ಮಾಡಬೇಕು. ಪ್ರಾರ್ಥನೆ ಮುಗಿದ ಮೇಲೆ ಶುಚಿಗೊಳಿಸಿ ಮತ್ತೆ ಪ್ರಾರ್ಥನೆ ಮಾಡಬೇಕು. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯವಾಗಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಜೆಡಿಎಸ್ ಅಧ್ಯಕ್ಷ ರಾಜಮಹ್ಮದ್ ರಾಜಾ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಇದ್ದರು.