ಶಹಾಬಾದ:ಕಲಬುರಗಿ ಗ್ರಾಮೀಣ ಕ್ಷೇತ್ರದ ದೇವನತೆಗನೂರ ಗ್ರಾಮದಲ್ಲಿ ಬಿಜೆಪಿ ಮುಖಂಡರಾದ ಬಸವರಾಜ ದೊಡ್ಡಮನಿ ಮತ್ತು ಲೋಹಿತ ಪೂಜಾರಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಅಪಾರ ಕಾರ್ಯಕರ್ತರು ಶಾಸಕ ಬಸವರಾಜ ಮತ್ತಿಮಡು ಅವರ ಸಮ್ಮುಖದಲ್ಲಿ ಮಂಗಳವಾರದಂದು ಬಿಜೆಪಿಗೆ ಸೇರ್ಪಡೆಗೊಂಡರು. ಎಲ್ಲ ಕಾರ್ಯಕರ್ತರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಸ್ಥಾನಮಾನಗಳು ಸಿಗುತ್ತವೆ ಎಂಬುದಕ್ಕೆ ಅನೇಕ ಉದಾಹರಣೆಗಳು ಸಿಗುತ್ತವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರಗಳು ಜನಪರವಾದ ಯೋಜನೆ ಜಾರಿಗೆ ತಂದಿವೆ. ಉಭಯ ಸರ್ಕಾರಗಳ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಹೇಳಿದರು.
ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅ?ಗಿ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ , ಶಹಬಾದ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಶಿವಯೋಗಪ್ಪ ದೇವಣಿ, ರಾಜು ಚವ್ಹಾಣ, ಅಣವೀರ ಪಾಟೀಲ್ ಕೆಸರಟಗಿ, ಕೈಲಾಶ ಹುಲಿ, ಪ್ರಶಾಂತ ವಾಗ್ಮೋರೆ, ಚಂದ್ರಕಾಂತ ಕಾಂಬಳೆ, ಪ್ರಲ್ಹಾದ ದೊಡ್ಡಮನಿ, ನೀಲಕಂಠರಾವ ಪಾಟೀಲ್, ಅಪ್ಪು ಕಣಕಿ, ಬಸ್ಸು ದೇವಣಿ, ರವಿ ಪೂಜಾರಿ, ಮತ್ತು ದೇವನತೆಗನೂರ ಗ್ರಾಮದ ಪ್ರಮುಖರು ಪಕ್ಷದ ಮುಖಂಡರು ,ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು .