ಮೊರಾರ್ಜಿ ದೇಸಾಯಿ ವಸತಿ ಶಾಲೆ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
26

ಕಲಬುರಗಿ: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಶ್ರೀಮತಿ ಇಂದಿರಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮಾದರಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಹಾಗೂ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್. ಅಲ್ಲಾಬಕಷ್ ಅವರು ತಿಳಿಸಿದ್ದಾರೆ.

ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳ ಪೋಷಕರು ತಮ್ಮ ಸಮೀಪದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಶ್ರೀಮತಿ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ ಮಾದರಿ ವಸತಿ ಶಾಲೆಗಳ ಪ್ರಾಂಶುಪಾಲರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 2021ರ ಆಗಸ್ಟ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಪ್ರವರ್ಗ-1 ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ, ವಿಶೇಷ ವರ್ಗ (ಅಂಗವಿಕಲ, ದೇವದಾಸಿ ಮಕ್ಕಳು, ವಿಧವಾ ಮಕ್ಕಳು, ಅನಾಥ ಮಕ್ಕಳು, ಸಫಾಯಿ ಕರ್ಮಚಾರಿಗಳ ಮಕ್ಕಳು) ವಿದ್ಯಾರ್ಥಿಗಳು ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದಿಗೆ ಸಲ್ಲಿಸಬೇಕಾದ ಪ್ರಮಾಣಪತ್ರಗಳ ಕುರಿತು ಸಂಬಂಧಪಟ್ಟ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ 2,50,000 ರೂ. ದೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ 1,00,000 ರೂ. ದೊಳಗಿರಬೇಕು.

ಈ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯು 2021ರ ಸೆಪ್ಟೆಂಬರ್ 16 ರಂದು ಜರುಗಲಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಲಬುರಗಿ ಜಿಲ್ಲಾ ಸಮನ್ವಯಾಧಿಕಾರಿ ಶಿವರಾಮ ಚವ್ಹಾಣ ಇವರ ಮೊಬೈಲ್ ಸಂಖ್ಯೆ 9902846643 ಹಾಗೂ ಜಿಲ್ಲಾ ಮಾಹಿತಿ ಸಹಾಯಕರುಗಳಾದ ಆನಂದ ಕೆ. ಹಾಗೂ ಕುಮಾರ ಸ್ವಾಮಿ ಇವರ ಮೊಬೈಲ್ ಸಂಖ್ಯೆ 8095534843, 8971643125 ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here