ಕಲಬುರಗಿ: ಚಿಂಚೋಳಿ ಕ್ಷೇತ್ರದ ಮಾಜಿ ಶಾಸಕ ಮತ್ತು ಉಪಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲ್ಲುವಿಗೆ ಕಾರಣಕರ್ತರಾದ ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅಲ್ಪಸಂಖ್ಯಾತರ ಚಿಂಚೋಳಿ ತಾಲ್ಲೂಕು ಮಾಜಿ ಅಧ್ಯಕ್ಷರಾದ ಮೆಡಿಕಲ್ ಮಸ್ತಾನ್ ಸಾಬ್ ರಟಕಲ್ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ವಿಧಾನ ಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.
ಚಿಂಚೋಳಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ ವಲ್ಯಾಪುರವರನ್ನು ಎಂ.ಎಲ್.ಸಿ. ಮಾಡಿ ಮಂತ್ರಿ ಸ್ಥಾನ ನೀಡಿ ನನ್ನ ಪಕ್ಷದಲ್ಲಯೇ ಇಟ್ಟುಕೊಳ್ಳುತ್ತೇನೆ ಎಂದು ಸಭೆಯಲ್ಲಿ ಘೋಷಿಸಿದ್ದರು. ಅವರ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರು ಉಳಿಸಿಕುಡಬೇಕೆಂದು ಸ್ಮರಿಸುವ ಮೂಲಕ ಮನವಿ ಮಾಡಿದ್ದಾರೆ.