ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

0
73

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ – ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಅರ್ಹ ಫಲಾನುಭವಿಗಳು ಆನ್‍ಲೈನ್ ಮೂಲಕ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮದ https://adcl.karnataka.gov.in ವೆಬ್‍ಸೈಟ್‍ದಲ್ಲಿ ಅಪ್‍ಲೋಡ್ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಮೂರನೇ ಹಂತ, ಬಡೇಪುರ ಕಾಲೋನಿ, ಟೋಯಟೊ ಶೋರೂಂ ಎದುರಿಗೆ, ವಿಜಯಬ್ಯಾಂಕ್ ಮೇಲಗಡೆ, ಕಲಬುರಗಿ-585105 ಕಚೇರಿ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here