ಸೇಡಂ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಕಲಬುರಗಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲೂ ಕಲಬುರಗಿ ಜಿಲ್ಲೆಗೆ ಅನ್ಯಾಯ ಮಾಡಲಾಗಿತ್ತು ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಭಾಗದವರಿದ್ದರು.
ಉತ್ತರ ಕರ್ನಾಟಕ ಭಾಗದ ಕಾಳಜಿ ತೊರಿಲ್ಲ,
ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದೆ ಗಾಯದ ಮೇಲೆ ಬರೆ ಎಳೆದಂತಾಗಿದೆ, ಬಿಜೆಪಿ ಸರ್ವಾಧಿಕಾರಿ ಧೋರಣೆ ತೊರುತ್ತಿದೆ, ಸಚಿವ ಸಂಪುಟದಲ್ಲಿ ಕಲಬುರಗಿ ಜಿಲ್ಲೆಗೆ ಅನ್ಯಾಯವಾಗಿದೆ ಜಿಲ್ಲೆಯ ಒಬ್ಬರಿಗೂ ಸಚಿವ ಸ್ಥಾನ ನೀಡದೆ ಬಿಜೆಪಿ ಸರಕಾರ ಪ್ರಹಾರದ ಮೇಲೆ ಪ್ರಹಾರ ಮಾಡಿ ಅನ್ಯಾಯ ಮಾಡುತ್ತಿದೆ , ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾರೆ.
ನಾಮಕೆ ವಾಸ್ತೆ ಕಲ್ಯಾಣ ಕರ್ನಾಟಕ ಎಂದು ಘೋಷಣೆ ಮಾಡಿದರೆ ಸಾಲದು ಜಿಲ್ಲೆಯಲ್ಲಿ 5 ಬಿಜೆಪಿ ಶಾಸಕರಿದು ಒಬ್ಬರಿಗೂ ಸಚಿವ ಸ್ಥಾನ ನೀಡದಿರುವದು ಹಾಗೂ ಕಲ್ಯಾಣ ಕರ್ನಾಟಕ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಜಿಲ್ಲೆಗೆ
ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲೂ ಕಡೆಗಣಿಸಲಾಗಿದೆ.
ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ಬಜೆಟ್ ನಲ್ಲೂ ಕಲ್ಯಾಣ ಕರ್ನಾಟಕ್ಕೆ ನಿರ್ಲಕ್ಷ ಮಾಡಿ ಈ ಭಾಗಕ್ಕೆ ಬರಬೇಕಾದ ಹೋಸ ಹೋಸ ಯೋಜನೆಗಳು ಕಡಿತ ಮಾಡಿ ನಮ್ಮ ಭಾಗದ ಜನರಿಗೆ ಮೋಸಮಾಡಿಕೊಂಡು ಬರುತಿದೆ. ಬಿಜೆಪಿ ಸರ್ಕಾರ ನಮ್ಮ ಭಾಗದ ಜನರಿಗೆ ನೋವುಂಟು ಮಾಡಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದಾರೆ.