ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಮಂಜೂರಾಗಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ನಿವೃತ್ತ ಅಧಿಕಾರಿ/ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರ ಮೇಲೆ ಪಡೆಯಲಾಗುತ್ತಿದೆ. ಇದಕ್ಕಾಗಿ ಅರ್ಹ ನಿವೃತ್ತ ಅಧಿಕಾರಿ/ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೈ.ಕ.ಪ್ರ.ಅ. ಮಂಡಳಿಯ ಉಪಕಾರ್ಯದರ್ಶಿ ಡಾ. ಬಿ. ಸುಶೀಲಾ ಅವರು ತಿಳಿಸಿದ್ದಾರೆ.
ಹೊರಗುತ್ತಿಗೆ ಆಧಾರ ಮೇಲೆ ಪಡೆಯುವ ಕುರಿತ ಅರ್ಹತಾ ವಿವರ ಹಾಗೂ ಮತ್ತಿತರ ವಿವರವನ್ನು ಮಂಡಳಿಯ www.hkrdb.nic.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹರು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.