ಕಲಬುರಗಿ: ನಗರದ ಮೊಘಲ್ ಗಾರ್ಡನ್ ಪ್ರದೇಶದಲ್ಲಿ ಲಸಿಕೆ ಅಭಿಯಾನಕ್ಕೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಚಾಲನೆ ನೀಡಿದರು.
ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯುವ ಮೂಲಕ ಕೊರೋನಾ ಸೋಂಕಿನಿಂದ ಪಾರಾಗಬೇಕು ಎಂದು ಕರೆ ನೀಡಿದರು.
ಇದಕ್ಕೂ ಮನ್ನ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೇರೆ ಬೇರೆ ಪಕ್ಷದಿಂದ ಬಂದ ನಾಯಕರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಧ್ವಜ ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.