ಕಲಬುರಗಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ (ಅತಿ ಹೆಚ್ಚಿನ ಅಂಕಗಳಿಸಿ) ಪ್ರಥಮ, ದ್ವಿತೀಯ ಹಾಘೂ ತೃತೀಯ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳಿಗೆ 75ನೇ ಸ್ವ್ವಾತಂತ್ರ್ಯ ದಿನಾಚರಣೆ ದಿನದಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ಸನ್ಮಾನಿಸಿ ಪ್ರಶಂಸಾ ಪತ್ರ ವಿತರಿಸಿದರು.
ಆಳಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕು. ಮಹಿಮೂಬ ಸಾಬ ಅವರು 625 ಅಂಕಗಳ ಪೈಕಿ ಒಟ್ಟು 602 ಅಂಕ (ಶೇ. 96.32 ರಷ್ಟು) ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.
ದಂಡೋತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕು. ತೇಜಸ್ವಿನಿ ಅವರು ಒಟ್ಟು 625 ಅಂಕಗಳ ಪೈಕಿ 599 ಅಂಕ (ಶೇ. 95.84) ಪಡೆದು ದ್ವಿತೀಯ ಸ್ಥಾನ ಹಾಗೂ ಸಾವಳಗಿ (ಬಿ) ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಕು. ಸಾನಿಯಾ ಬೇಗಂ ಅವರು ಒಟ್ಟು 625 ಅಂಕಗಳ ಪೈಕಿ 592 (ಶೇ. 94.72) ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಗಾಗಿ ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು, ಕಲಬುರಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಶುಭ ಕೋರಿದರು.