6 ರಂದು ಫ.ಗು. ಹಳಕಟ್ಟಿ ಕುರಿತು ವಿಚಾರ ಸಂಕಿರಣ

0
109

ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ಮುದ್ನಾಳ್ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಜುಲೈ 6 ರಂದು ಬೆಳಿಗ್ಗೆ 10 ರಿಂದ 11-30 ರವರೆಗೆ ಡಾ. ಫ.ಗು. ಹಳಕಟ್ಟಿ ಅವರ ಬದುಕು- ಬರಹ ಕುರಿತು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕುಪೇಂದ್ರ ಪಾಟೀಲ್ ಅವರು ಇಲ್ಲಿ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆಯನ್ನು ಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಅಪ್ಪಾರಾವ್ ಅಕ್ಕೋಣಿ ಅವರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ವೀರಶೈವ ವಿದ್ಯಾವರ್ಧಕ ಸಂಘದ ಜಂಟಿ ಕಾರ್ಯದರ್ಶಿ ಎಸ್.ಡಿ. ನಿಜಗುಣಿ ಅವರು ವಹಿಸುವರು. ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಡಾ. ಪ್ರೇಮಾ ಅಪಚಂದ್ ಅವರು ವಹಿಸುವರು ಎಂದರು.

Contact Your\'s Advertisement; 9902492681

ಸಮಾಜದ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಕುರಿತು ೨ನೇ ಗೋಷ್ಠಿಯಲ್ಲಿ ಸಹ ಪ್ರಾಧ್ಯಾಪಕ ಡಾ. ಕಲ್ಯಾಣರಾವ್ ಪಾಟೀಲ್ ಅವರು ಅನುಭಾವ ನೀಡುವರು. ಅತಿಥಿಗಳಾಗಿ ವಚನೋತ್ಸವ ಪ್ರತಿಷ್ಠಾನದ ಅಧ್ಯಕ್ಷ ಡಾ. ಬಸವರಾಜ್ ಮೋದಿ ಅವರು ಆಗಮಿಸುವರು. ಅಧ್ಯಕ್ಷತೆಯನ್ನು ರಾಜ್ಯ ಹಟಗಾರ್ ಸಮಾಜದ ಅಧ್ಯಕ್ಷ ಆರ್.ಸಿ. ಘಾಳೆ ಅವರು ವಹಿಸುವರು ಎಂದು ಅವರು ತಿಳಿಸಿದರು.

ಮಧ್ಯಾಹ್ನ ೩ ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ನ್ಯಾಯವಾದಿ ಬಾಬುರಾವ್ ಮಂಗಾಣೆ ಅವರು ಸಮಾರೋಪ ನುಡಿಗಳನ್ನಾಡುವರು. ಅತಿಥಿಗಳಾಗಿ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಆಶಾದೇವಿ ಕೂಬಾ ಅವರು ಆಗಮಿಸುವರು. ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಿವರಾಜ್ ಎಸ್. ಅಂಡಗಿ ಅವರು ವಹಿಸುವರು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿನೋದಕುಮಾರ್ ಜನವರಿ, ಡಾ. ಪ್ರೇಮಾ ಅಪಗುಂಡೆ, ಸಂಗಮೇಶ್ ಕರಡಿ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here