ಶಹಾಬಾದ: ದಯವಿಟ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಇದು ಸರ್ಕಾರದ ಕರ್ತವ್ಯ ಅಲ್ಲ. ನಮ್ಮ ಕರ್ತವ್ಯ ಎಂದು ಬಿಜೆಪಿ ಮುಖಂಡ ಪ್ರಕಾಶ ಪಾಟೀಲ ಹೇಳಿದರು.
ಅವರು ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳನ್ನು ಮಕ್ಕಳಿಗೆ ವಿತರಿಸಿ ಮಾತನಾಡಿದರು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಆದ್ದರಿಂದ ಮಕ್ಕಳು ತಪ್ಪದೇ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆಯಿದೆ.ಅದು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಲಾಗುತ್ತಿದೆ. ನಾವು ಈ ಕರೋನಾ ಮೂರನೇ ಅಲೆಯನ್ನು ಮಣಿಸಲೇಬೇಕಿದೆ. ಹೀಗಾಗಿ ಎಲ್ಲಾ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.ಅಲ್ಲದೇ ನಿಮ್ಮ ಮನೆಯಲ್ಲಿ ಪಾಲಕರಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಲು ಹೇಳಿ.ಕೊರೊನಾ ಅಲೆಯ ಅಪಾಯದಿಂದ ಪಾರಾಗಲು ಸ್ವಪ್ರೇರಣೆಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಬಾವಿ ಮಾತನಾಡಿ, ಕೊರೊನಾ ಸೋಂಕಿನಿಂದ ಪಾರಾಗಲು ಜಾಗೃತರಾಗಬೇಕು. ಸರ್ಕಾರ ಹೊರಡಿಸಿರುವ ಕೋವಿಡ್-೧೯ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಶಿಕ್ಷಕರ ಮಾರ್ಗದರ್ಶನದಂತೆ ಮಕ್ಕಳು ಮಾಸ್ಕ್ ಧರಿಸಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದು ಕೊಳ್ಳುವಂತೆ ಎಚ್ಚರ ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಮನೋಭಾವ ರೂಢಿಸಿಕೊಂಡರೆ ಕೊರೊನಾ ಸೋಂಕು ಹರಡುವಿಕೆ ಯನ್ನು ಪರಿಣಾಮಕಾರಿಯಾಗಿ ತಡೆಗಟ್ಟ ಬಹುದು ಎಂದು ಹೇಳಿದರು.
ಕಮಲಾಪೂರ ಡಯಟ್‌ನ ಅಧಿಕಾರಿ ಮಲ್ಲಪ್ಪ , ಬಿಜೆಪಿ ಮುಖಂಡರಾದ ಶಾಂತು ಸೌಕಾರ, ವೀರೇಶ ಸ್ವಾಮಿ, ಶಿವು ಟೆಂಗಳಿ, ಮುಖ್ಯಗುರುಗಳಾದ ಶಂಕರ ಜಾಧವ, ಶಿಕ್ಷಕರಾದ ದತ್ತಪ್ಪ ಕೋಟನೂರ್,ವಿಷ್ಟುತೀರ್ಥ ಆಲೂರ,ಶಶಿಕಲಾ ಕೋಕಟನೂರಕರ್,ಸೀತಮ್ಮ.ಎನ್, ಶಾಂತಮಲ್ಲ ಶಿವಭೋ ಇತರರು ಇದ್ದರು.
ಚಿತ್ರ ಶೀರ್ಷಿಕೆ
೨೬ಎಸ್‌ಬಿಡಿ೧
ಶಹಾಬಾದ: ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಬಿಜೆಪಿ ಮುಖಂಡರಾದ ಪ್ರಕಾಶ ಪಾಟೀಲ, ಶಾಂತು ಸೌಕಾರ ಹಾಗೂ ವಿರೇಶ ಸ್ವಾಮಿ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಜರ್‌ಗಳನ್ನು ವಿತರಿಸಿದರು.