ಕಲಬುರಗಿ: ಜಿಲ್ಲಾ ಪ್ರವಾಸದಲ್ಲಿರುವ ಆಮ್ ಆದ್ಮಿ ಪಕ್ಷದ ರಾಜಾಧ್ಯಕ್ಷರಾದ ಪೃಥ್ವಿರೆಡ್ಡಿಯವರ ನೇತೃತ್ವದ ಪಕ್ಷದ ನಿಯೋಗವು ಕಲಬುರಗಿಯ ಪುರಾಣ ಪ್ರಸಿದ್ಧ ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಡಾ.ಶರಣ ಬಸಪ್ಪ ಅಪ್ಪಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ಕುರಿತು ಶ್ರೀ ಅಪ್ಪಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಆಮ್ ಆದ್ಮಿ ಪಕ್ಷಕ್ಕೆ ಶುಭ ಹಾರೈಸಿ ಯಶಸ್ಸು ದೊರೆಯಲಿ ಎಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಹಸಂಚಾಲಕರಾದ ವಿಜಯ್ ಶರ್ಮಾ, ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್, ಜಿಲ್ಲಾಧ್ಯಕ್ಷರಾದ ಜಗದೀಶ್ ಬಳ್ಳಾರಿ, ಯುವ ಘಟಕದ ರಾಜಾಧ್ಯಕ್ಷರಾದ ಮುಕುಂದ ಗೌಡ ಇನ್ನೂ ಇತರ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದರು.