ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆ ಅಂಗವಾಗಿ ಇಂದು ವಾರ್ಡ ನಂಬರ್ 18 ನಮ್ಮ ಪಕ್ಷದ ಅಭ್ಯರ್ಥಿ ಅಲಿಂ ಅಹ್ಮದ್ ಅವರ ಪರವಾಗಿ ವಿವಿಧ ಬೂತ್ ಗಳಲ್ಲಿ ಮತ ಯಾಚನೆ ಮಾಡಲಾಯಿತು.
ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ತಾವು ಲೀಡ್ ನೀಡಿ ಗೆಲುವಿಗೆ ಕಾರಣರಾಗಿದ್ದೀರಿ, ಅದೇ ರೀತಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಿ, ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು ಅವರು, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಅಧ್ಯಕ್ಷರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.