ಲಸಿಕೆಯಿಂದ ಅಡ್ಡ ಪರಿಣಾಮಗಳಿಲ್ಲ; ತಹಶೀಲ್ದಾರ ವರ್ಮಾ

0
86

ಶಹಾಬಾದ: ನಗರದ ಕೆಲವು ಸಾರ್ವಜನಿಕರು ಕೋವಿಡ್ ಲಸಿಕೆಯಿಂದ ದೂರ ಉಳಿದಿರುವುದನ್ನು ಕಂಡು ಸರಕಾರ ಕೋವಿಡ್ ಲಸಿಕೆಯನ್ನು ಹಾಕಲು ಸಾರ್ವಜನಿಕರ ವಸತಿ ಸಮೀಪದಲ್ಲಿಯೇ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಇದರ ಸಂಪೂರ್ಣ ಸದುಪಯೋಗಪಡಿಸಿಕೊಳ್ಳಬೇಕೆಂದು ತಹಶೀಲ್ದಾರ ಸುರೇಶ್ ವರ್ಮಾ ಹೇಳಿದರು.

ಅವರು ಬುಧವಾರ ನಗರದ ಜಿಇ (ಎಬಿಎಲ್) ಕಾಲೋನಿಯಲ್ಲಿ ಆಯೋಜಿಸಲಾದ ಲಸಿಕಾ ಕೇಂದ್ರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಕುರಿತು ಮಾತನಾಡಿದರು.

Contact Your\'s Advertisement; 9902492681

ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಇದೊಂದು ಕೊರೊನಾ ವೈರಸ್ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಲಸಿಕೆಯಾಗಿದೆ. ಇದರಿಂದ ಕೊರೊನಾ ತೀವ್ರತೆ ಕಡಿಮೆಯಾಗುತ್ತದೆ.ಆದ್ದರಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಕೊರೊನಾ ಮುಕ್ತ ನಗರ ಮಾಡಲು ಪಣತೊಡಬೇಕು.ಅಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನಿಮ್ಮ ಹಾಗೂ ಕುಟುಂಬದ ಸ್ವಾಸ್ಥ್ಯ ಕಾಪಾಡಲು ಸ್ವಯಂ ಪ್ರೇರಣೆಯಿಂದ ಲಸಿಕೆ ತೆಗದುಕೊಳ್ಳಲು ಮುಂದೆ ಬರಬೇಕೆಂದು ಮನವಿ ಮಾಡಿಕೊಂಡರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಲಸಿಕೆ ಹಾಕಿಸಿಕೊಳ್ಳುವುದರಿಂದ ಜ್ವರ ಬರುತ್ತದೆ.ಮೈಕೈ ನೋವು ಆಗುತ್ತದೆ ಎಂದು ಜನರು ಹೇಳುತ್ತಿದ್ದಾರೆ. ಸಾವಿರಾರು ಜನರು ಈ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.ಅದರಲ್ಲಿ ಬೆರಳಣಿಕೆಯಷ್ಟು ಜನರಿಗೆ ಸ್ವಲ್ಪ ಜ್ವರ ಹಾಗೂ ಮೈಕೈ ನೋವು ಬರುತ್ತದೆ.ಎಲ್ಲರಿಗೂ ಬರುವುದಿಲ್ಲ.ಆದರೂ ಭಯಪಡುವ ಅಗತ್ಯವಿಲ್ಲ.ಕೇವಲ ಒಂದು ದಿನದಲ್ಲಿ ಮತ್ತೆ ಆರಾಮವಾಗಿರುತ್ತೀರಿ.ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೂಲಕ ರೋಗಾಣುಗಳ ವಿರುದ್ಧ ಹೋರಾಡುತ್ತದೆ.ಆದ್ದರಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಹಾಗೂ ಸುತ್ತಮುತ್ತಲಿನ ಜನರಿಗೂ ತಿಳಿಸಿ ಎಂದು ಹೇಳಿದರು.

ಶಹಾಬಾದ ತಾಲೂಕಿನಲ್ಲಿ ಬುಧವಾರ ಸುಮಾರು 4000 ಜನರಿಗೆ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಕಂದಾಯ ಅಧಿಕಾರಿ ಸುನೀಲಕುಮಾರ ವೀರಶೆಟ್ಟಿ, ಆರೋಗ್ಯ ನೀರಿಕ್ಷಕ ಶರಣು, ಆರೋಗ್ಯ ನಿರೀಕ್ಷಣಾ ಅಧಿಕಾರಿ ಯುಸೂಫ್ ನಾಕೇದಾರ, ಶಂಕರ ಭಗಾಡೆ, ವಿನೋದ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here