ಸೇಡಂ : ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೇಷ್ಠ ಜ್ಞಾನ, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸೂಕ್ತ ಮಾರ್ಗದರ್ಶನ ಮಾಡಿ, ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪನ್ಮೂಲಗಳನ್ನಾಗಿ ತನ್ಮೂಲಕ ಸದೃಢ ರಾಷ್ಟ್ರದ ನಿರ್ಮಾಣ ಶಿಲ್ಪಗಳಾಗಿ ದೇಶಕ್ಕೆ ಅಮೋಘವಾದ ಕೊಡುಗೆಯನ್ನು ನೀಡುತ್ತಿದ್ದಾರೆ. ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಹೇಳಿದರು.
ಸೇಡಂ ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ‘ಶಿಕ್ಷಕರ ದಿನಾಚರಣೆ’ ಮತ್ತು ಉತ್ತಮ ಶಿಕ್ಷಕರಿಗೆ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ, ಅವರು ಮಾತನಾಡಿ ನಮ್ಮ ಪ್ರದೇಶ ಹಿಂದುಳಿದಿಲ್ಲ. ಅನೇಕ ಪ್ರತಿಭೆಗಳು ಉನ್ನತವಾದ ಸಾಧನೆಯನ್ನು ಮಾಡುತ್ತಿದ್ದಾರೆಂದರೆ.
ಈ ಭಾಗದ ಶಿಕ್ಷಕರ ಪರಿಶ್ರಮವೇ ಇದಕ್ಕೆ ಕಾರಣವಾಗಿದೆ. ಶಿಕ್ಷಕರು ಪಠ್ಯದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳ ಗುಣಗಳನ್ನು ಬೆಳೆಸುವ ಕಾರ್ಯ ನಿರಂತರವಾಗಿ ಮಾಡಬೇಕಾಗಿದೆ, ಶಿಕ್ಷಕ ಸಮುದಾಯ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಾವಿತ್ರಿಬಾ ಫುಲೆ ಅವರ ಕೊಡುಗೆ ಮರೆಯುವಂತಿಲ್ಲ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಎಕ್ಬಾಲ್ ಖಾನ, ವಿಜಯಕುಮಾರ ಕುಲಕರ್ಣಿ, ಡಾ.ಬಸವರಾಜ ತಳವಾರ, ಹಸನಪ್ಪ ಮೈತ್ರಿ, ಮುಸ್ತಫಾ ಕೇರೋಳ್ಳಿ, ಸಂತೋಷ ಕೇರೋಳ್ಳಿ, ವೀರೇಶ್ ಕೇರೋಳ್ಳಿ,ರಾಘವೇಂದ್ರ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .
ಶಿಕ್ಷಕಿಯರಿಗೆ ಸನ್ಮಾನ: ಮಹಾದೇವಿ, ಕವಿತಾ, ಅಂಜುಮ್, ಶರಣಮ್ಮಾ ಶಿಕ್ಷಕಿಯರಿಗೆ ಸನ್ಮಾನಿಸಲಾಯಿತು.