ರುಕ್ಮಾಪುರ ಶಾಲೆಯ ದೈಹಿಕ ಶಿಕ್ಷಕ ಮುತ್ತಪ್ಪಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

0
13

ಸುರಪುರ: ಜಿಲ್ಲಾ ಪಂಚಾಯತಿ ಯಾದಗಿರಿ,ಉಪ ನಿರ್ದೇಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾಯಾಲಯ ಯಾದಗಿರಿ ವತಿಯಿಂದ ರವಿವಾರದಂದು ಯಾದಗಿರಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ರುಕ್ಮಾಪುರ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಮುತ್ತಪ್ಪ ಕರಿಹೊಳೆ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲು ಹೊದಿಸಿ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಸತ್ಕರಿಸಲಾಯಿತು,ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ,ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ,ಡಿಡಿಪಿಐ ಶಾಂತಗೌಡ ಪಾಟೀಲ,ಅಧಿಕಾರಿಗಳಾದ ಡಿ.ಎಮ್.ಹೊಸ್ಮನಿ ಇತರರು ಉಪಸ್ಥಿತರಿದ್ದರು.

Contact Your\'s Advertisement; 9902492681

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮುತ್ತಪ್ಪ ಕರಿಹೊಳೆ ಅವರು ಮೂಲತ: ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದರಾಗಿದ್ದು ೧೯೯೭ರಲ್ಲಿ ದೈಹಿಕ ಶಿಕ್ಷಕರಾಗಿ ನೇಮಕಗೊಂಡು ಕಳೆದ ೨೫ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಕೊಪ್ಪಳ ಜಿಲ್ಲೆ ಹಾಗೂ ತಾಲೂಕಿ ದೇವರಗೋನಾಲ ಗ್ರಾಮದಲ್ಲಿ ಸೇವೆ ಸಲ್ಲಿಸಿದ್ದು ಮತ್ತು ಸದ್ಯ ರುಕ್ಮಾಪುರ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಗುಲಬರ್ಗಾ ವಿಶ್ವವಿದ್ಯಾಲಯದ ಉತ್ತಮ ಖೋ ಖೋ ಆಟಗಾರರಾಗಿದ್ದ ಇವರು ಅಂತರ ವಿಶ್ವವಿದ್ಯಾಲಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅನೇಕ ಕ್ರೀಡಾಕೂಟಗಳಲ್ಲಿ ನಿರ್ಣಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಅಭಿನಂದನೆ : ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮುತ್ತಪ್ಪ ಕರಿಹೊಳೆ ದೈಹಿಕ ಶಿಕ್ಷಕರನ್ನು ಪ್ರಾಥಮಿಕ ಶಿಕ್ಷಕರ ಸಂಘ,ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here