ಕಲಬುರಗಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಿಗೆ ಹಾಗೂ ಪಕ್ಷಕ್ಕೆ ಮತ ನೀಡಿ ಆಶೀರ್ವದಿಸಿದ ಕಲಬುರಗಿ ನಗರದ ಜನತೆಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಅಭಿನಂದನೆಗಳು. ಜನರ ಆಶೋತ್ತರಗಳಿಗೆ ಪೂರಕವಾಗಿ ಸ್ಪಂದಿಸಿ, ಕಲಬುರಗಿ ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ತಾವೆಲ್ಲರೂ ಶ್ರಮಿಸುತ್ತೇರೆಂಬ ವಿಶ್ವಾಸವಿದೆ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.