ಬೆಂಗಳೂರು: ಕ್ಯಾಂಪಸ್ ಫ್ರಂಟ್ ಕರ್ನಾಟಕ ವತಿಯಿಂದ ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆಯ ಕುರಿತು ಪತ್ರಿಕಾಗೋಷ್ಠಿಯು ಬೆಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು.
ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತತೆಯ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಒತ್ತಾಯಿಸಲಾಯಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ, ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ರಾಜ್ಯ ಸಮಿತಿ ಸದಸ್ಯ ಹುಸೇನ್ ಬಾಶಾ ಕೊಪ್ಪಳ ಹಾಗು ಬೆಂಗಳೂರು ಜಿಲ್ಲಾಧ್ಯಕ್ಷ ಆಕಿಬ್ ಬೆಂಗಳೂರು ಉಪಸ್ಥಿತರಿದ್ದರು.