ಕಲಬುರಗಿ: ಸೆಪ್ಟೆಂಬರ್ 17 ರಂದು ಜರುಗುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೈದರಾಬಾದ್ ಕರ್ನಾಟಕ ವಿಮೋಚನೆ ಆದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಇದೊಂದು ಹಬ್ಬದ ದಿನ.ಅಷ್ಟೇ ಅಲ್ಲದೆ ಈ ಭಾಗದ ಜನರಿಗೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ.ಹೀಗಾಗಿ ಹಲವು ವರ್ಷಗಳಿಂದ ಅದ್ದೂರಿಯಾಗಿ ನಡೆಸುತ್ತಾ ಬರಲಾಗಿದೆ.ಆದರೆ ದುರದೃಷ್ಟಕರ ಎಂದರೆ ಸರಕಾರ ಹೆಚ್ಚಿನ ಆಸಕ್ತಿ ವಹಿಸದೆ ಕೇವಲ ಕಾಟಾಚಾರಕ್ಕೆ ಎಂಬಂತೆ ಆಚರಿಸುತ್ತಿರುವುದು ದುರಂತ.ಶಾಲಾ ಕಾಲೇಜುಗಳಲ್ಲಿ ವಿಮೋಚನೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು.ಇದರಿಂದ ವಿದ್ಯಾರ್ಥಿಗಳಲ್ಲಿ ಇತಿಹಾಸ ಮೂಡುತ್ತದೆ.ಉತ್ಸವ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.ಇದರಲ್ಲಿ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಬೇಕು.ಈ ಭಾಗದ ಸಾಹಿತ್ಯ,ಕಲೆ, ಸಂಸ್ಕೃತಿ ಬಗ್ಗೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ದಶಕಗಳಿಂದ ಆಚರಿಸುತ್ತಿರುವ ಈ ಉತ್ಸವಕ್ಕೆ ಮುಖ್ಯಮಂತ್ರಿಗಳು ಬಂದು ಪಾಲ್ಗೋಳ್ಳಬೇಕು.
ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಬೇಕು.ಸೆಪ್ಟೆಂಬರ 17 ರಂದು ರಜೆ ಪೋಷಿಸಬೇಕು ಎಂಬುದು ಈ ಭಾಗದ ಜನರ ಬೇಡಿಕೆ ಇದೆ.ಜನರ ಆಸೆಯಂತೆ ರಜೆ ಪೋಷಿಸಬೇಕು.ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಮಳೆ ಹೆಚ್ಚಾಗಿ ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾಳಾಗಿವೆ.ಉದ್ದು, ಹೆಸರು, ಸೋಯಾಬೀನ್ ಸೇರಿದಂತೆ ವಾಣಿಜ್ಯ ಬೆಳೆ ಕಬ್ಬು,ಬಾಳೆ ಹಾನಿಗೊಳಗಾಗಿದವೆ.ಇದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ.ಕೆಲವೆಡೆ ಹೆಸರು,ಉದ್ದು ರಾಶಿ ಆದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ.ಸರಕಾರ ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು.ಅತಿವೃಷ್ಪಿಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.