ಅನ್ನದಾಸೋಹ ಜತೆಗೆ ಜ್ಞಾನದಾಸೋಹ ಬಿತ್ತಿದ ಪೂಜ್ಯ ದೊಡ್ಡಪ್ಪ ಅಪ್ಪ

0
22

ಕಲಬುರಗಿ : ಶರಣಬಸವೇಶ್ವರ ಸಂಸ್ಥಾನದ ಏಳನೇ ಪೀಠಾಧಿಪತಿಗಳಾದ ಲಿಂ.ಪೂಜ್ಯ ದೊಡ್ಡಪ್ಪ ಅಪ್ಪ ಅವರು ಅನ್ನದಾಸೋಹದ ಜತೆಗೆ ಜ್ಞಾನದಾಸೋಹವನ್ನು ಆರಂಭಿಸಿದವರು ಎಂದು ಕೊಪ್ಪಳದ ಖ್ಯಾತ ಉದ್ದಿಮೆಗಳಾದ ಶಾಂತಣ್ಣ ಮುದಗಲ್ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಐದು ದಿನಗಳ ಲಿಂ.ಪೂಜ್ಯ ದೊಡ್ಡಪ್ಪ ಅಪ್ಪ ಅವರ ೩೮ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೂಜ್ಯ ದೊಡ್ಡಪ್ಪ ಅಪ್ಪ ಅವರು ಈ ಭಾಗದ ಹೆಣ್ಣುಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿ ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಕಾರಣರಾದವರು. ಅವರು ಆರಂಭಿಸಿದ ಶಿಕ್ಷಣ ಸಂಸ್ಥೆಯನ್ನು ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ಹೆಮ್ಮರವಾಗಿ ಬೆಳೆಸಿದ್ದಾರೆ ಎಂದರು.

Contact Your\'s Advertisement; 9902492681

ಪ್ರತಿಯೊಬ್ಬರಲ್ಲಿ ಒಂದಿಲ್ಲೊಂದು ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿಕೊಳ್ಳುವುದು ಮುಖ್ಯ. ಸತತ ಓದು, ಕಠಿಣ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಗಿದೆ. ಮಹಾವಿದ್ಯಾಲಯಕ್ಕೆ ತಾವು ೩ ಲಕ್ಷ ರೂ. ನೀಡಿ ಹೇಳಿ ಅದರಿಂದ ಪ್ರತಿವರ್ಷನು ಉನ್ನತ ಸ್ಥಾನದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಮುಕ್ತಾಂಬಿಕಾ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಮ್.ಆರ್.ಹುಗ್ಗಿ ಅವರು ಮಾತನಾಡಿ, ಶರಣರು ಉದಾತ್ತ ಗುಣಗಳನ್ನು ಹೊಂದಿದ್ದರು ಅವರ ಗುಣಗಳು ಪ್ರತಿಯೊಬ್ಬರಿಗೆ ದಾರಿದೀಪವಾಗಬೇಕು. ಪೂಜ್ಯ ದೊಡ್ಡಪ್ಪ ಅಪ್ಪ ಅವರು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಈ ಭಾಗಕ್ಕೆ ಅವರ ಕೊಡುಗೆ ಅಮೋಘವಾದದ್ದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, ಜಗತ್ತಿನಾದ್ಯಂತ ಈ ಭಾಗದ ಮಹಿಳೆಯರು ಶೈಕ್ಷಣಿಕ ಸಾಧನೆಗೆ ಪೂಜ್ಯ ದೊಡ್ಡಪ್ಪ ಅಪ್ಪ ಅವರ ಕೊಡುಗೆ ಅಮೂಲ್ಯವಾದದ್ದು, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ ಪೂಜ್ಯರಂತೆ ಇಂದಿನ ಪೀಠಾಧಿತಿಪಗಳಾದ ಪೂಜ್ಯ ಶರಣಬಸವಪ್ಪ ಅಪ್ಪ ಅವರು ಮಹಿಳೆಯರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಪ್ರತಿವರ್ಷ ಮಹಾವಿದ್ಯಾಲಯದಿಂದ ಪೂಜ್ಯ ದೊಡ್ಡಪ್ಪ ಅಪ್ಪ ಅವರ ಪುಣ್ಯಸ್ಮರಣೋತ್ಸವ ದಿನದಂದು ಅಪ್ಪಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಕಲಾವಾಣಿ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಜಾನಕಿ ಹೊಸುರ ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು, ಸಹ ಸಲಹೆಗಾರರಾದ ಡಾ.ಸೀಮಾ ಪಾಟೀಲ ಪ್ರಾರ್ಥಿಸಿದರು. ಡಾ.ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಕೃಪಾಸಾಗರ ಗೊಬ್ಬುರ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here