ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ: ಸಿಎಂ ಬೊಮ್ಮಾಯಿ ಭರವಸೆ

0
96

ಕಲಬುರಗಿ: ಸಮಗ್ರ ಕರ್ನಾಟಕದ ಅಭಿವೃದ್ಧಿ ಜೊತೆಗೆ ಕಲ್ಯಾಣ ಕೃನಾಟಕದ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈ.ಕ. ಭಾಗವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ಕೀರ್ತಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೆ ಎಂದು ಹೇಳಿದರು.

Contact Your\'s Advertisement; 9902492681

ಸರ್ದಾರ ವಲ್ಲಭಭಾಯಿ ಪಟೇಲರ ಕಟ್ಟು ನಿಟ್ಟಿನ ಕ್ರಮದಿಂದಾಗಿ ಈ ಭಾಗ ನಿಜಾಮ ಅರಾನ ಕಪಿಮುಷ್ಠಿಯಿಂದ ಭಾರತ ಒಕ್ಕೂಟದಲ್ಲಿ ಸೇರಿತು. ಹಿಂದುಳಿದ ಈ ಭಾಗಕ್ಕೆ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ರೂಪಿಸಿದೆ ಎಂದು ಅವರು ವಿವರಿಸಿದರು.

ಇದೇ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಅವರು, ನವ ಭಾರತ ನಿರ್ಮಾಣದ ಸರ್ಕಾರದ ಸಂಕಲ್ಪಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಸುಭಾಷ ಗುತ್ತೇದಾರ, ರಾಜಕುಮಾರ ಪಾಟೀಲ ತೆಲ್ಕೂರ, ಶಶೀಲ ಜಿ.‌ನಮೋಶಿ, ಬಿ.ಜಿ. ಪಾಟೀಲ, ಮುಖಂಡರಾದ ಅಮರನಾಥ ಪಾಟೀಲ, ಚಂದು ಪಾಟೀಲ, ಕಲ್ಯಾಣ ಕರ್ನಾಟಕ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಅನೇಕರು ಇದ್ದರು.

ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಅವರು ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದಕ್ಕೆ ಗಣ್ಯರು ಸೇರಿದಂತೆ ಜನ ಸಾಮಾನ್ಯರು ಸಾಕ್ಷಿಯಾಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here