ಕಲಬುರಗಿ: ಕಲ್ಯಾಣ ಕರ್ನಾಟ ಉತ್ಸವದ ನಿಮಿತ್ತ ಇಂದು ನಗರ ಸರದಾರ ವಲ್ಲಭಭಾಯಿ ಪಟೇಲ್ ವೃತದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸರದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಡಾ. ಉಮೇಶ್ ಜಾಧವ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ, ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ಡಾ. ಅವಿನಾಶ್ ಜಾಧವ್, ಬಸವರಾಜ್ ಮತ್ತಿಮುಡ್, ಸುಭಾಸ್ ಆರ್ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಚಂದು ಪಾಟೀಲ್, ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸಿದ್ದಾಜಿ ಪಾಟೀಲ್, ಶಶೀಲ್ ಜಿ ನಮೋಶಿ, ಲಕ್ಷ್ಮಣ ದಸ್ತಿ ಸೇರಿದಂತೆ ಇತರರು ಇದ್ದರು.