ಕಲಬುರಗಿಯ ಉತ್ತರ ಮಂಡಲದ ಮಹಾದೇವಿ ತಾಯಿ ಮಹಿಳಾ ವಿದ್ಯಾವರ್ಧಕ ಸಂಘದ ವೃದ್ಧಾಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕ್ರೆಡಲ ಅಧ್ಯಕ್ಷ ಚಂದು ಪಾಟೀಲ ಅವರು ಉಪಹಾರ ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಪ್ರದಾನ ಕಾರ್ಯದರ್ಶಿ ಉಮೇಶ ಪಾಟೀಲ, ಉತ್ತರ ಮಂಡಲ ಅಧ್ಯಕ್ಷ ಅಶೋಕ ಮಾನಕರ, ಉತ್ತರ ಮಂಡಲದ ಪ್ರದಾನ ಕಾರ್ಯದರ್ಶಿ ಜೈಸಿಂಗ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾಗಿರತಿ, ಉತ್ತರ ಮಂಡಲದ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಾವಿತ್ರಿ, ಉಪಾಧ್ಯಕ್ಷೆ ರೇಣುಕಾ ಬಿರಾದಾರ, ಮುಖಂಡರಾದ ಅಂಬಾದಾಸ ಕುಲಕರ್ಣಿ, ಉತ್ತರ ಮಂಡಲದ ಮಹಾನಗರ ಪಾಲಿಕೆಯ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.